ಬೆಳ್ತಂಗಡಿ : ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ರವಿವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ ಎಂಬವರವ ಪುತ್ರ ಉದಯ ಗೌಡ(43) ಎಂಬವರೇ ಮೃತರಾದವರು. ಈ ಸಾವು ಹೇಗೆ ಸಂಭವಿಸಿದೆ ಎಂಬುದೇ ಈಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಉದಯ ಗೌಡ ಅವರು ರವಿವಾರ ಸಂಜೆ ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ.
ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆ ವೇಳೆಗೆ ಅವರು ತೋಟದಲ್ಲಿ ಸಾವನ್ನಪ್ಪಿದ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಈ ಬಗ್ಗೆ ಮನೆಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆನಡೆಯುತ್ತಿದೆ.