Posts

ಧರ್ಮಸ್ಥಳ ಲಕ್ಷ ದಿಫೋತ್ಸವ ಪ್ರಯುಕ್ತ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ



ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಇಂದು (ನ.19) ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ಜರುಗಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜಾ ಅವರು ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು,  ರಾಜ್ಯಸಭೆಯ ಸದಸ್ಯರೂ ಆಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಉಪಸ್ಥಿತರಿದ್ದು ಆಶೀರ್ವದಿಸಿದರು.

ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ, ಎಸ್‌ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಏನ್ ಜನಾರ್ಧನ್, ವಸ್ತು ಪ್ರದರ್ಶನ ಮಳಿಗೆಯ ಮೇಲುಸ್ತುವಾರಿದಾರರಾದ ಯತೀಶ್ ಬಳಂಜ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಎಸ್‌ಡಿಎಂ ಆಸ್ಪತ್ರೆಯ ಆಡಳಿತಾಧಿಕಾರಿ ಜನಾರ್ದನ್, ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಿಸ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್,  ರಾಮಕೃಷ್ಣ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಪ್ರಶಾಂತ್, ರತ್ನರಾಜ ಹೆಗ್ಡೆ  ಮೊದಲಾದವರು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official