Posts

ಮುಂಡಾಜೆಯಲ್ಲಿ ಬೈಕ್ ಸ್ಕಿಡ್ ಆಗಿ ಅಣಿಯೂರಿನ ಪ್ರದೀಪ ದಾರುಣ ಸಾವು

1 min read


ಬೆಳ್ತಂಗಡಿ; ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ, ಅಣಿಯೂರಿನ ಪ್ರದೀಪ ಗೌಡ (22) ಎಂಬವರು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ರಾತ್ರಿ 10.30 ಕ್ಕೆ ನಡೆದಿದೆ.

ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ಅತ್ತ ತೆರಳುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. 

ಅಪಘಾತವಾದ ರಸ್ತೆಯು ಅಪಾಯಕಾರಿ ವಲಯವಾಗಿದ್ದು ಹಿಂದೆ ಕೂಡಾ ಇಲ್ಲಿ ಅಪಘಾತ ಮತ್ತು ಪ್ರಾಣ ಹಾನಿ ಸಂಭವಿಸಿದೆ. ಪ್ರದೀಪ ಅವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರು ಮನೆಯ ಗೇಟಿನ‌ಬಳಿ ಇದ್ದ ಕಲ್ಲಿನ‌ಕಂಬಕ್ಕೆ ಡಿಕ್ಕಿಹೊಡೆದಿದೆ. ಅವರು ತಂದಿದ್ದರೆಂಬ ಸಾಮಾನಿನ ಪೊಟ್ಟಣ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ. 

ಅಪಘಾತ ಆದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪದ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ಯತ್ನ ನಡೆಸಿದರಾದರೂ ದಾರಿ ಮಧ್ಯೆ ಪ್ರದೀಪ ಅವರು ಪ್ರಾಣಚೆಲ್ಲಿದ್ದಾರೆ. ಇನ್ನಷ್ಟು ಮಾಹಿತಿ ಲಭಿಸಬೇಕಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment