Posts

ಕಾಶಿಬೆಟ್ಟು ಬಳಿ ಅಪಘಾತ; ಚಾರ್ಮಾಡಿಯ ಪುರುಷೋತ್ತಮ ಪೂಜಾರಿ ದಾರುಣ ಸಾವು

0 min read

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ರಂದು ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ಎಂಬವರು ಸಾವನ್ನಪ್ಪಿದ್ದಾರೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. 

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment