Posts

ಗರ್ಡಾಡಿ ಬಳಿ ಯುನೋವಾ ಕಾರು ಬಸ್ಸು ಅಪಘಾತ ; ಇಬ್ಬರು ಸಾವು

1 min read


ಬೆಳ್ತಂಗಡಿ; ಇಲ್ಲಿನ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ (ಗೋಳಿಯಂಗಡಿ) ಬಳಿ ಇನೋವಾ ಕಾರು ಮತ್ತು ಲೀಝಾ ಖಾಸಗಿ ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಮಂಗಳೂರು ತಾಲೂಕು ಗಂಜಿಮಠ ಬಲ್ಗುಲಿಪಾಡಿ "ದಾರುಲ್ ಕರಾಮ" ನಿವಾಸಿ ಸೂರಲ್ಪಾಡಿ ನೌಶಾದ್ ಹಾಜಿ(44) (ಅಬ್ದುಲ್ ಹಮೀದ್ ಎನ್.) ಮತ್ತು ಅವರ ವಾಹನ ಚಾಲಕ ಮಂಗಳೂರು ತಾಲೂಕು ಉಳಾಯಿಬೆಟ್ಟು ಆಚೆಬೆಟ್ಟು ನಿವಾಸಿ ಮುಹಮ್ಮದ್  ಮುಶ್ರಫ್(20) ಎಂಬವರೆಂದು ಗುರುತಿಸಲಾಗಿದೆ.


ಇನೋವ ಕಾರು, ಬಸ್ಸು ನಡುವೆ ಈ ಅವಘಡ ಸಂಭವಿಸಿದೆ. ನೌಶಾದ್ ಹಾಜಿ‌ ಅವರು ಇಂಜಿನಿಯರ್ ಕೂಡ ಆಗಿದ್ದು, ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಉ ಕೋಶಾಧಿಕಾರಿಯೂ ಆಗಿದ್ದರು.
ಅಗತ್ಯ ಕೆಲಸದ ನಿಮಿತ್ತ ಅವರು ಬೆಳ್ತಂಗಡಿಗೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 
ಅಪಘಾತದ ಮಾಹಿತಿ ದೊರೆಯುತ್ತಿದ್ದಂತೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದ ಬಳಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮೃತದೇಹ ವೀಕ್ಷಿಸಿದರು. 
ದಾರುಸ್ಸಲಾಂ ಸಂಸ್ಥೆ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರು ಆಗಮಿಸಿ ದುಆ ನೆರವೇರಿಸಿ, ಮೃತರ ಬಂಧುಗಳಿಗೆ ಸಾಂತ್ವಾನ ಹೇಳಿದರು.
ಮೂಲತಃ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದ ನೌಶಾದ್ ಹಾಜಿ ಸೂರಲ್ಪಾಡಿಯವರು ಪ್ರಸಕ್ತ ಗಂಜಿಮಠದ ಸೂರಲ್ಪಾಡಿಯಲ್ಲಿ ನೆಲೆಸಿದ್ದರು. ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿದ್ದ ಅವರು "ನಂಡೆ ಪೆಂಜಳ್" ಅಭಿಯಾನದ ಸ್ಥಾಪಕಾಧ್ಯಕ್ಷರಾಗಿದ್ದರು. ಬೆಳ್ತಂಗಡಿಯ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಕೋಶಾಧಿಕಾರಿಯಾಗಿ, ಮೂಡುಬಿದಿರೆ ಕಾಶಿಪಟ್ಟದ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾರ್ಯದರ್ಶಿಯಾಗಿ, ಗುರುಪುರ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. 
ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಇಂದು ಬೆಳ್ತಂಗಡಿಯ ದಾರುಸ್ಸಲಾಂ ಸಂಸ್ಥೆಯ ವತಿಯಿಂದ ನೂತನವಾಗಿ ಆರಂಭಿಸಿದ ಹಜ್ಜ್ ಟೂರ್ ಇದರ ಲಾಯಿಲದ ಕಚೇರಿ ಉದ್ಘಾಟನೆಗಾಗಿ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ. ನಿರಂತರವಾಗಿ ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು ಕಳೆದ ರಾತ್ರಿಯೂ ಕೂಡ ಅಡ್ಕ ಬೈಕಂಪಾಡಿ ಉರೂಸ್ ಕಾರ್ಯಕ್ರಮ ದಲ್ಲಿ ತಡರಾತ್ರಿಯವರೆಗೂ ಭಾಗವಹಿಸಿದ್ದರು.
ಮೃತ ನೌಶಾದ್ ಹಾಜಿಯವರು ಪತ್ನಿ, ಐವರು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
-------

ಸಂತಾಪ; ಕರ್ನಾಟಕ ರಾಜ್ಯ ಅಝ್ಹರೀಸ್ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ನಝೀರ್ ಅಝ್ಹರಿ ಬೊಳ್ಮಿನಾರ್, ಎಸ್ಕೆಎಸ್ಸೆಸ್ಸೆಫ್ ಬೆಳ್ತಂಗಡಿ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವರದಿ; ಅಚ್ಚು ಮುಂಡಾಜೆ
ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment