ಬೆಳ್ತಂಗಡಿ :ಕಾಜೂರು ಮಖಾಂ ಶರೀಫ್ ನಲ್ಲಿ ಫೆ.12 ರ ವರೆಗೆ ನಡೆಯಲಿರುವ ಉರೂಸ್ ಕಾರ್ಯಕ್ರಮಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು
ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಕಾಜೂರು ಆಡಳಿತ ಮಂಡಳಿ, ಸ್ವಯಂ ಸೇವಕರು ಎಲ್ಲರೂ ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಅತಿಥಿಗಳಂತೆ ಗೌರವಿಸಬೇಕು ಎಂದು ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ H.K ರವರು ಮಾರ್ಗದರ್ಶನ ನೀಡಿದರು.
ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆಯ ಬಗ್ಗೆ ಸಮಿತಿ ಜೊತೆ ಶನಿವಾರ ವಿಶೇಷ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.
ಸಭೆಯ ಅಧ್ಯಕ್ಷತೆಯನ್ನು ಉರೂಸ್ ಸಮಿತಿ ಅಧ್ಯಕ್ಷ K.U ಇಬ್ರಾಹಿಂ ವಹಿಸಿದ್ದು ಸ್ವಾಗತಿಸಿ ಪೋಲಿಸ್ ಇಲಾಖೆಯ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ನೂತನ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.ವೇದಿಕೆಯಲ್ಲಿ ಉರೂಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದು, ಜಿಲ್ಲಾ ವಕ್ಫ್ ಸದಸ್ಯ JH ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಮುಹಮ್ಮದ್ ಕಮಾಲ್, ಕಿಲ್ಲೂರು ಮುಹಿಯುದ್ದೀನ್ ಜುಮಾ ಮಸೀದಿಯ ಅಬೂಬಕ್ಕರ್ ಮಲ್ಲಿಗೆಮನೆ, ಕಾಜೂರು ಉಪಾಧ್ಯಕ್ಷ ಬದ್ರುದ್ದೀನ್ H ಮತ್ತು ಅಬ್ದುರ್ರಹ್ಮಾನ್ K ಹಾಗೂ ಉರೂಸ್ ಸಮಿತಿಯ ಪದಾಧಿಕಾರಿಗಳು ಸದಸ್ಯರು ಮತ್ತು ಕಾಜೂರು ಕಿಲ್ಲೂರು ಜಮಾತ್ ಪ್ರತಿನಿಧಿಗಳು ಉಪಸ್ಥಿತರಿದ್ದರು.