Posts

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಮುಹಮ್ಮದ್ ನಝೀರ್ ಶಕ್ತಿನಗರ ನೇಮಕ

1 min read

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ದ.ಕ ಜಿಲ್ಲಾ ಅಲ್ಪಸಂಖ್ಯಾತ ಪಟಕದ ಕಾರ್ಯದರ್ಶಿಯಾಗಿ ಯುವ ಉದ್ಯಮಿ ಹಾಗೂ ಗುತ್ತಿಗೆದಾರ ಮುಹಮ್ಮದ್ ನಝೀರ್ (ಶಕ್ತಿ ನಗರ) ಅವರನ್ನು ನೇಮಕಗೊಳಿಸಿ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಆದೇಶ ನೀಡಿದ್ದಾರೆ. 

ಏ.16 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಅವರ ಸಮ್ಮುಖ ಈ ಆದೇಶ ಪತ್ರ ನೀಡಿದರು.

ಮುಹಮ್ಮದ್ ನಝೀರ್ ಅವರು ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾಗಿ, ತಾಲೂಕು ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಮಾನವ ಹಕ್ಕುಗಳ ಆಯೋಗದ ಜಿಲ್ಲಾ ಸಮಿತಿ ಸದಸ್ಯರಾಗಿ ಸೇರಿದಂತೆ ಪಕ್ಷದಲ್ಲಿ ಈ ಹಿಂದೆ ತನಗೆ ವಹಿಸಿದ್ದ ಎಲ್ಲಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವಿಯಾಗಿದ್ದಾರೆ. 

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ಣ ಅವರ ಅನುಮೋದನೆಯಂತೆ ಈ ನೇಮಕ ಮಾಡಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment