ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಶನಿವಾರ ಉಜಿರೆಯಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. ಈ ಜಾಥಾ ದಲ್ಲಿ ದ.ಕ ಲೋಕ ಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತದಾರರ ಗಮನಸೆಳೆಯಲು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಧಾನ ಪರಿಷತ್ ಜೆಡಿಎಸ್ ಸಭಾ ನಾಯಕ ಎಸ್.ಎಲ್ ಭೋಜೇ ಗೌಡ ಭಾಗಿಯಾಗಲಿದ್ದಾರೆ.
ಶನಿವಾರ ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ಈ ರೋಡ್ ಶೋ ನಡೆಯಲಿದೆ.ಶಾಸಕ ಹರೀಶ್ ಪೂಂಜ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಮಂದಿ ಬಿಜೆಪಿ ಪ್ರಮುಖರು, ಜೆಡಿಎಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.