Posts

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಯು.ಕೆ ಮುಹಮ್ಮದ್ ಹನೀಫ್ ಉಜಿರೆ ನೇಮಕ

ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ  ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ಉಜಿರೆ ಇವರನ್ನು ನೇಮಕಗೊಳಿಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಆದೇಶ ಹೊರಡಿಸಿದ್ದಾರೆ.  

ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಮುಹಮ್ಮದ್ ಹನೀಫ್ ಅವರು ದ.ಕ ಜಿಲ್ಲಾ ವಕ್ಸ್ ಸಲಹಾ ಸಮಿತಿಯ ಮಾಜಿ ಸದಸ್ಯರಾಗಿ ಎರಡು ಅವಧಿ ಪೂರೈಸಿದ್ದಾರೆ. ಉತ್ತಮ ಕ್ರೀಡಾ ಪಟುವಾಗಿ, ಸಂಘಟಕರಾಗಿ, ಕೊಡುಗೈ ದಾನಿಯಾಗಿ, ಸಮಾಜ ಸೇವಕರಾಗಿಯೂ ಚಿರಪರಿಚಿತರಾಗಿದ್ದಾರೆ. ಪಕ್ಷದ ತಳಮಟ್ಟದಿಂದ ವಿವಿಧ ಜವಾಬ್ದಾರಿ ಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಶಿಫಾರಸ್ಸಿನ ಮೇರೆಗೆ ಪಕ್ಷದ ಹಿರಿಯ ಮುಖಂಡರುಗಳ ಅನುನೋದನೆಯಂತೆ ಅವರು ಇದೀಗ ಬ್ಲಾಕ್ ಅಲ್ಪ ಅಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿ ಹುದ್ದೆಗೆ ನೇಮಕಗೊಂಡಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official